ಅಂತ್ಯಸಂಸ್ಕಾರದ ಸಮಯದಲ್ಲಿ ಹೆಜ್ಜೇನು ದಾಳಿ: 20ಕ್ಕೂ ಹೆಚ್ಚು ಜನರಿಗೆ ಗಾಯ

Hejjenu attack mandya
Published on

ಮಂಡ್ಯ: ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿ 20ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದೆ.

ಗ್ರಾಮದ ಹೊರವಲಯದಲ್ಲಿ ಪಾಪಣ್ಣ ಎಂಬುವರ ಶವಸಂಸ್ಕಾರ ಮಾಡಲು ಹೋಗಿದ್ದ ಸಂದರ್ಭದಲ್ಲಿ ಗಂಧದ ಕಡ್ಡಿ, ಧೂಪದ ಹೊಗೆಗೆ ಅಲ್ಲಿಯೇ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಏಕಾಏಕಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ ಎಲ್ಲರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ಹೋದ ಬಳಿಕ ಮತ್ತೆ ವಾಪಸ್ ಬಂದು ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಹೆಜ್ಜೇನು ದಾಳಿಯಲ್ಲಿ ಬನ್ನೂರು ಪುಟ್ಟಸ್ವಾಮಿ, ಮೈಸೂರಿ ಸರಸ್ವತಿ, ಸ್ಥಳೀಯರಾದ ಅಭಿಷೇಕ್, ಶಿವರಾಜು, ದಿವ್ಯಾ, ಬೋರೇಗೌಡ, ಕಾರ್ತಿಕ್, ನಿತ್ಯಾನಂದ, ನಿತಿನ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಈ ಪೈಕಿ ಬನ್ನೂರು ಪುಟ್ಟಸ್ವಾಮಿ, ಮೈಸೂರಿ ಸರಸ್ವತಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಉಳಿದವರನ್ನು ಚಿಕಿತ್ಸೆ ನೀಡಿ ಸಂಜೆ ವೇಳೆಗೆ ಮನೆಗೆ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net