

ಕೊಳ್ಳೇಗಾಲ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಿಯಮ ಉಲ್ಲಂಘಿಸಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದ್ದವರಿಗೆ ಸೋಮವಾರ ಪಟ್ಟಣ ಪೊಲೀಸ್ ಠಾಣೆ ಪಿಎಸ್‌ಐ ಬಿ.ವಿ.ವರ್ಷಾ ಅರಿವು ಮೂಡಿಸಿದರು.
ಸಿಬ್ಬಂದಿಯೊಂದಿಗೆ ನಗರದಲ್ಲಿ ಗಸ್ತು ಹಾಕಿದ ಅವರು, ಡಾ.ರಾಜ್‌ಕುಮಾರ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡಿದ್ದವರಿಗೆ ತಿಳಿ ಹೇಳಿದರು. ಸುಗಮ ಸಂಚಾರಕ್ಕೆ ಅಡಚಣೆಯಾಗದಂತೆ ಪಾರ್ಕಿಂಗ್ ಮಾಡುವಂತೆ ಸಲಹೆ ನೀಡಿದರು. ಪಟ್ಟಣದ ಮಸೀದಿ ವೃತ್ತದಲ್ಲಿ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು.
ಅಪರಾಧ ವಿಭಾಗದ ಪಿಎಸ್‌ಐ ಉಮಾವತಿ, ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಇದ್ದರು.