

ಮೈಸೂರು: ಗುರುಪೂರ್ಣಿಮೆ ಅಂಗವಾಗಿ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ದಾಸೋಹಕ್ಕೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಒಂದು ಲಕ್ಷ ರೂ. ದೇಣಿಗೆ ಚೆಕ್ ಅನ್ನು ಬುಧವಾರ ಹಸ್ತಾಂತರಿಸಲಾಯಿತು.
ಚಂದ್ರವನ ಆಶ್ರಮದಲ್ಲಿ ಚೆಕ್ ಸ್ವೀಕರಿಸಿ ಆಶೀರ್ವಚನ ನೀಡಿದ ಆಶ್ರಮದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮಾತನಾಡಿ, ಜೀವಧಾರ ರಕ್ತ ನಿಧಿ ಕೇಂದ್ರ ಯಶಸ್ವಿಯಾಗಿ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಸಾಮಾಜಿಕ ಹಾಗೂ ಧಾರ್ಮಿಕ, ಸನಾತನ ಧರ್ಮದ ಕೆಲಸವನ್ನು ಮಾಡುತ್ತಿರುವುದು ಬಹಳ ಸಂತೋಷ ತಂದುಕೊಟ್ಟಿದೆ ಎಂದರು.
ಭಾರತೀಯ ಪರಂಪರೆಯಲ್ಲಿ ಮಠಗಳ ಪಾತ್ರ ಅಮೋಘವಾಗಿದ್ದು, ಪ್ರತಿಯೊಂದು ಮಠಗಳಿಗೆ ಭಕ್ತರೇ ಆಧಾರ ಸ್ತಂಭ, ಧರ್ಮ ಪರಂಪರೆ ಉಳಿಸಿಕೊಂಡು ಬರುವಲ್ಲಿ ಮಠಮಾನ್ಯಗಳ ಸೇವೆ ಅಮೋಘ, ಹೆತ್ತ ತಂದೆ ತಾಯಿ ಮತ್ತು ಋಣ ತೀರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ. ಪ್ರತಿಯೊಂದರ ಹಿಂದೆ ಗುರುವಿನ ಅವಶ್ಯಕತೆವಿದ್ದು, ಗುರುವಿನ ಆಶೀರ್ವಾದವಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ತಿಳಿಸಿದರು.
ಚಂದ್ರವನ ಆಶ್ರಮದ ಆಡಳಿತಾಧಿಕಾರಿ ಚಿಕ್ಕತಿಮ್ಮಯ್ಯ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮುಖಂಡರಾದ ಮುತ್ತಣ್ಣ, ಜಯಪ್ರಕಾಶ್, ಪರೀಕ್ಷಿತ್ ರಾಜ ಅರಸ್, ಮಂಜುನಾಥ್ ಇತರರು ಇದ್ದರು.