ಮಲೇರಿಯಾ ತಡೆಗೆ ಸಹಕರಿಸಿ

unnamed
Published on

ಮೂಗೂರು:ಅಂಬೇಡ್ಕರ್ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮೂಗೂರು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮ ಆರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರ ಸಮಿತಿ ಹಾಗೂ ಪಾಲಕರ ಸಭೆ ನಡೆಯಿತು.

ಮೂಗೂರು ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮೀನಾಕ್ಷಿ ಮಾತನಾಡಿ, ಮಾರಕ ರೋಗಗಳಾದ ಡೆಂೆ, ಮಲೇರಿಯಾ ಪ್ರಕರಣಗಳನ್ನು ನಿಯಂತ್ರಿಸಲು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು. ಕುಷ್ಠರೋಗ ಹಾಗೂ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಆಗಾಗ ರಕ್ತ ,ಕಫ ಪರೀಕ್ಷೆ ಮಾಡಿಸಿ ಇಲಾಖೆಯ ಸಿಬ್ಬಂದಿಗೆ ಸಹಕರಿಸಬೇಕು ಎಂದರು.

ಅಂಧತ್ವ ನಿವಾರಣಾ ಕಾರ್ಯಕ್ರಮದಡಿಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಕನ್ನಡಕವನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ ಅನೀಮಿಯಾ ಪೌಷ್ಟಿಕ ಆಹಾರ ಸೋಪ್ಪು ತರಕಾರಿಯ ಬಳಕೆಯ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಆರೋಗ್ಯ ಸಂರಕ್ಷಣಾಧಿಕಾರಿ ಶಾಂತಮ್ಮ, ಅಂಗನವಾಡಿ ಕಾರ್ಯಕರ್ತೆ ಎಂ.ವಸಂತ ಗೀತಾ, ಆಶಾ ಕಾರ್ಯಕರ್ತೆ ಶೋಭಾ, ರೇಖಾ, ಉಷಾ, ಪಾಲಕರು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net