ಜೈನ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಆರ್ಥಿಕ ನೆರವು

cash.jpg
Published on


ಬೆಳಗಾವಿ: ಇತ್ತಿಚಿಗೆ ನಡೆದ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು  ಉತ್ತೀರ್ಣರಾದ ಹಾಗೂ ಆರ್ಥಿಕವಾಗಿ ಹಿಂದುಳಿದ ಜೈನ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕಾಗಿ ಜಿತೋ ಬೆಳಗಾವಿ ವಿಭಾಗದ ವತಿಯಿಂದ  ಜೀತೊ ಶ್ಯಾಂಕಿ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು.  
ಈ ಯೋಜನೆ ಕಳೆದ 10 ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದ್ದು, ಈ ವರ್ಷವೂ ಸಹ ಈ ಯೋಜನೆಯನ್ನು ಮುಂದುವರೆಸಲಾಗಿದೆ.  ಈ ಯೋಜನೆ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾತ್ರ ಸಿಮೀತವಾಗಿರುತ್ತದೆ.  ಹತ್ತನೇಯ ತರಗತಿ ಪಾಸಾದ  ಹಾಗೂ ಆರ್ಥಿಕವಾಗಿ ಹಿಂದುಳಿದ  ವಿದ್ಯಾರ್ಥಿಗಳು ಜೂನ್ 5ರ ಒಳಗಾಗಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ  ಎಂದು ಜಿತೋ ಬೆಳಗಾವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net