ಜನರ ಆರ್ಥಿಕ ಪ್ರಗತಿಗೆ ನೆರವು

grama
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲೂಕು ಮತ್ತು ಬ್ಯಾಂಕ್ ಆಫ್ ಬರೋಡ ಸಹಯೋಗದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶದಲ್ಲಿ ನಾಗರಾಜ ಶೆಟ್ಟಿ ಮಾತನಾಡಿದರು.
Published on

ಬ್ರಹ್ಮಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕ್ಷೇತ್ರದ ಜನಹಿತ ಯೋಜನೆಯಂತೆ ಒಂದು ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹಲವಾರು ಸೇವಾ ಕೇಂದ್ರದ ಮತ್ತು ಕಾರ್ಯಕರ್ತರ ಮೂಲಕ ಜನರ ಆರ್ಥಿಕ ಪ್ರಗತಿಗೆ ನೆರವು ನೀಡುವ ಸಂಸ್ಥೆ ಎಂದು ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.

ಬ್ರಹ್ಮಾವರ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲೂಕು ಮತ್ತು ಬ್ಯಾಂಕ್ ಆಫ್ ಬರೋಡ ಸಹಯೋಗದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.

ಬ್ಯಾಂಕ್ ಆಫ್ ಬರೋಡಾ ಬ್ರಹ್ಮಾವರ ಶಾಖೆ ಶಾಖಾ ಪ್ರಬಂಧಕ ಸಕಾರಾಮ್, ಸ್ವಸಹಾಯ ಸಂಘಗಳು ಬ್ಯಾಂಕ್‌ಗೆ ನೀಡಬೇಕಾದ ದಾಖಲಾತಿ ಮತ್ತು ಬ್ಯಾಂಕ್ ಪ್ರತಿನಿಧಿಯಾಗಿ ಎಸ್.ಕೆ.ಡಿ.ಆರ್.ಪಿ ನಿರ್ವಹಿಸುತ್ತಿರುವ ಜವಾಬ್ದಾರಿಗಳ ಬಗ್ಗೆ, ಸಿಬಿಲ್ ಕುರಿತು ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಕಾಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆ ಎಂ.ಆರ್.ಎಸ್ ಯೋಜನಾಧಿಕಾರಿ ಸ್ವಪ್ನಾ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರ ತಾಲ್ಲೂಕು ಕೋಶಾಧಿಕಾರಿ ರಾಜೀವ ಕುಲಾಲ್, ಯೋಜನೆ ಕೋಟ ವಲಯಾಧ್ಯಕ್ಷ ದಿನೇಶ, ಯಡ್ತಾಡಿಯ ಪುರುಷೋತ್ತಮ, ಚಂದ್ರ ಮರಕಾಲ ಬಾರ್ಕೂರು, ರಮೇಶ ಕೊಕ್ಕರ್ಣೆ, ಶೌರ್ಯ ಟೀಮ್ ಮಂಜುನಾಥ ಬಾರಕೂರು ಉಪಸ್ಥಿತರಿದ್ದರು. ಯೋಜನೆ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ರಮೇಶ ಪಿ.ಕೆ. ಸ್ವಾಗತಿಸಿದರು. ಯೋಜನೆಯ ವಿವಿಧ ಕಾರ್ಯಕ್ರಮಗಳು ಮತ್ತು ತಾಲೂಕಿನ ಸಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಎಸ್.ಬಾರ್ಕೂರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net