

ಹೆಬ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವಸ್ಥಾನ, ಭಜನಾ ಮಂದಿರ, ಶಾಲೆ, ಇನ್ನಿತರ ಸಾಮಾಜಿಕ ಚಟುವಟಿಕೆಗೆ ಕೋಟಿಗಟ್ಟಲೆ ಅನುದಾನ ವ್ಯಯ ಆಗಿದೆ. ಜನರ ಕಷ್ಟ-ಸುಖ ಅರಿತು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಬೇಕಾದ ಎಲ್ಲ ರೀತಿಯ ಸಹಕಾರ ಶ್ರೀ ಕ್ಷೇತ್ರ ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ ಹೇಳಿದರು.
ಶ್ರೀ ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ನೀಡಿದ 5 ಲಕ್ಷ ರೂ. ಮೊತ್ತದ ಡಿಡಿಯನ್ನು ಕಲ್ಲಮಠದ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಲಾಯಿತು.
ಜೀರ್ಣೋದ್ಧಾರ ಸಮಿತಿ, ಟ್ರಸ್ಟ್ ಅಧ್ಯಕ್ಷ ಪದ್ಮನಾಭ ಭಟ್ ಕಲ್ಲಮಠ, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಎಸ್., ಶ್ರೀ ಗೋಪಾಲಕೃಷ್ಣ ಮಠದ ಪ್ರಧಾನ ಅರ್ಚಕ ರಘುಪತಿ ಭಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಹಿರಿಯಡ್ಕ ವಲಯ ಅಧ್ಯಕ್ಷ ಗಣೇಶ್ ನಾಯ್ಕ, ಹಿರಿಯಡ್ಕ ಮೇಲ್ವಿಚಾರಕ ಶ್ರೀರಾಜ್ ಇದ್ದರು.