ಆರೋಗ್ಯ ಶಿಬಿರದ ಸದುಪಯೋಗ ಪಡೆಯಿರಿ

09 KRN-2
Published on

ಕೆ.ಆರ್.ನಗರ: ಲಯನ್ಸ್ ಕ್ಲಬ್ ಆಫ್ ಮೈಸೂರು ಕೃಷ್ಣರಾಜ ಮತ್ತು ಲಯನ್ಸ್ ಕ್ಲಬ್ ಸೆಂಟ್ರಲ್ ಮೈಸೂರು ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಗಂಟಲು, ಕಿವಿ ದೋಷವಿರುವವರಿಗೆ ಪಟ್ಟಣದ ಪುರಸಭೆಯ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ ನೀಡಿದರು.

ಕಿವಿ ಮತ್ತು ಗಂಟಲು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಉಚಿತವಾಗಿ ಚಿಕಿತ್ಸೆ ನೀಡಿ ಅವಶ್ಯಕವಿರುವವರಿಗೆ ಸಲಕರಣೆ ನೀಡಲಾಗುತ್ತದೆ. ಇದನ್ನು ಕ್ಷೇತ್ರದ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು. ಭೇರ್ಯದ ಸಾರ್ವಜನಿಕ ಆಸ್ಪತ್ರೆ, ಸಾಲಿಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಹೊಸೂರು ಬಸ್ ನಿಲ್ದಾಣ ಮತ್ತು ಹೊಸಕೋಟೆ ಗ್ರಾಮದ ಕುರ್ಜು ಆವರಣದಲ್ಲಿ ಆಯೋಜಿಸಲಾಗಿದ್ದು, ಅ.12ರವರೆಗೆ ನಡೆಯಲಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಬಡಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತದೆ. ಇದರ ಜತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ವೈದ್ಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ರೋಗಿಗಳು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕ್ಲಬ್‌ನ ಜಿಲ್ಲಾ ಗರ್ವನರ್ ಕೃಷ್ಣೇಗೌಡ, ಅಧ್ಯಕ್ಷ ದೇವೇಗೌಡ, ಕಾರ್ಯದರ್ಶಿ ಮೋಹನ್, ಪದಾಧಿಕಾರಿಗಳಾದ ಬಿ.ಎಂ.ಆಕಾಶ್, ವನಿತಾ ದೇವಯ್ಯ, ಸೋಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಯುವ ಕಾಂಗ್ರೆಸ್ ಅಧ್ಯಕ್ಷ ದೆಗ್ಗನಹಳ್ಳಿ ಆನಂದ್, ಅಡಗೂರು ಗ್ರಾಪಂ ಅಧ್ಯಕ್ಷ ಮಹದೇವ್, ಮುಖಂಡರಾದ ಪಂಚಾಕ್ಷರಿ, ಕೆ.ಎನ್.ಪ್ರಸನ್ನ, ರವಿಪೂಜಾರಿ, ಮಹದೇವ್, ಕುಮಾರ್, ಬಾಂಡ್ ಮೋಹನ, ಕಿರಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net