ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ 20ರಂದು

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ ಅಂಗವಾಗಿ ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಜುಲೈ 20ರಂದು ಬೆಳಗ್ಗೆ 10.30 ಗಂಟೆಗೆ ರಡ್ಡಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಮಾಜದ ಸಾಧಕರು ಹಾಗೂ 2024-25ನೇ ಸಾಲಿನಲ್ಲಿ ನಿವೃತ್ತರಾದ ನೌಕರರಿಗೆ ಸನ್ಮಾನಿಸಲಾಗುವುದು.

ಮಣಕವಾಡದ ಶ್ರೀ ಮೃತ್ಯುಂಜಯ ಸ್ವಾಮೀಜಿ, ಹುಬ್ಬಳ್ಳಿ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಎನ್.ಎಚ್. ಕೋನರಡ್ಡಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷಕ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಾರ್ವಿುಕ ಸಚಿವ ಸಂತೋಷ ಲಾಡ್, ಟ್ರಸ್ಟ್ ಗೌರವಾಧ್ಯಕ್ಷ ನಿಂಗನಗೌಡ ಪಾಟೀಲ, ಅಧ್ಯಕ್ಷ ಫಕ್ಕೀರಪ್ಪ ತಟ್ಟಿಮನಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net