29 ರಂದು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಅಡಿಗಲ್ಲು ಸಮಾರಂಭ

Hemaraddy Mallamma Temple foundation ceremony on the 29th
ಬಾಗಲಕೋಟೆ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಅಧ್ಯಕ್ಷ ಮಹೇಶ ಕಕರಡ್ಡಿ ಮಾತನಾಡಿದರು. ಸಂಸ್ಥೆ ಮುಖ್ಯ ಕಾರ್ಯದರ್ಶಿ ಈಶ್ವರ ಕೋನಪ್ಪನವರ, ಉಪಾಧ್ಯಕ್ಷೆ ಶೋಭಾ ಕಟಗೇರಿ, ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ, ನಿರ್ದೇಶಕರಾದ ರಾಜು ಪಾಟೀಲ, ವೆಂಕಣ್ಣ ಶೇಷಪ್ಪನವರ ಇತರರು ಇದ್ದರು.
Published on

ಬಾಗಲಕೋಟೆ: ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯಿಂದ ನವನಗರದ ಸೆಕ್ಟರ್ ಸಂಖ್ಯೆ 6ರಲ್ಲಿ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರ ದೇವಸ್ಥಾನ, ವಿದ್ಯಾರ್ಥಿ ನಿಲಯ ಮತ್ತು ಗ್ರಂಥಾಲಯ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭ ಡಿ.29 ರಂದು ಬೆಳಗ್ಗೆ 10:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಮಹೇಶ ಕಕರಡ್ಡಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರೇಹೊಸಳ್ಳಿಯ ಮಹಾಯೋಗಿ ವೇಮನ ಸಂಸ್ಥಾನಮಠದ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಮಾಜಿ ಸಚಿವ ಎಸ್.ಆರ್.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ದೇವಾಲಯಗಳಿಗೆ ಸಚಿವ ರಾಮಲಿಂಗಾರೆಡ್ಡಿ, ಸಾಂಸ್ಕೃತಿಕ ಹಾಗೂ ದಾಸೋಹ ಭವನಕ್ಕೆ ಸಚಿವ ಎಚ್.ಕೆ.ಪಾಟೀಲ ಹಾಗೂ ವಿದ್ಯಾರ್ಥಿ ಭವನ ಹಾಗೂ ಗ್ರಂಥಾಲಯಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ಎಚ್.ವೈ.ಮೇಟಿ ಹಾಗೂ ಜೆ.ಟಿ.ಪಾಟೀಲ, ವಿಪ ಸದಸ್ಯರಾದ ಪ್ರಕಾಶ ಹುಕ್ಕೇರಿ, ಪಿ.ಎಚ್.ಪೂಜಾರ, ಹಣಮಂತ ನಿರಾಣಿ ಹಾಗೂ ಸುನೀಲಗೌಡ ಪಾಟೀಲ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಎಸ್ಪಿ ಅಮರನಾಥ ರೆಡ್ಡಿ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಂಸ್ಥೆ ಮುಖ್ಯ ಕಾರ್ಯದರ್ಶಿ ಈಶ್ವರ ಕೋನಪ್ಪನವರ ಮಾತನಾಡಿ, ಏಳೆಂಟು ದಶಕಗಳ ಹಿಂದೆ ಸಮಾಜದ ಹಿರಿಯರಾದ ಶಿಕ್ಷಣ ಪ್ರೇಮಿ ದಿ. ರಾಮಣ್ಣ ಸೊನ್ನದ ಅವರು ಬಡ ವಿದ್ಯಾರ್ಥಿಗಳಿಗೆ ಉಚಿತ ರಡ್ಡಿ ವಸತಿ ನಿಲಯ ಮಾಡಿ ಅವರಿವರೆನ್ನದೆ ಎಲ್ಲರಿಗೂ ಉಚಿತ ಊಟ ನೀಡುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಕಲ್ಪಿಸಿದ್ದಾರೆ.

ಅವರ ಹಾದಿಯಲ್ಲಿ ನಡೆಯಬೇಕೆಂದು ನಿರ್ಧರಿಸಿ ಸಮಾಜ ಸೇರಿ ಇತರ ವರ್ಗದ ಬಡವರಿಗೆ ಅನುಕೂಲವಾಗಲೆಂದು ಎಲ್ಲರಿಗೂ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಉಚಿತ ಊಟದ ವ್ಯವಸ್ಥೆಯನ್ನು ಈ ವಿದ್ಯಾರ್ಥಿ ಭವನದಲ್ಲಿ ಮಾಡುವ ಯೋಚನೆ ಹೊಂದಲಾಗಿದೆ.

ಅಂದಾಜು 1.5 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಒಂದು ವರ್ಷದಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಹೇಳಿದರು.

ಸಂಸ್ಥೆ ಉಪಾಧ್ಯಕ್ಷೆ ಶೋಭಾ ಕಟಗೇರಿ, ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ, ನಿರ್ದೇಶಕರಾದ ರಾಜು ಪಾಟೀಲ ಹಾಗೂ ವೆಂಕಣ್ಣ ಶೇಷಪ್ಪನವರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net