

ವಿಜಯವಾಣಿ ಸುದ್ದಿಜಾಲ ಉಡುಪಿ
ಸಮಾಜದ ಅಭಿವೃದ್ಧಿಗಾಗಿ ತೊಡಗಿಸಿಕೊಂಡಿದ್ದ ಎಲ್ಲ ಸಂತರು, ಶರಣರು-ಶರಣೆಯರು ಹಾಗೂ ಮಹಾನ್ ವ್ಯಕ್ತಿಗಳು ಸಮಾಜದ ಆಸ್ತಿಯಾಗಿದ್ದಾರೆ. ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಮುಂದಿನ ಪೀಳಿಗೆಗೆ ಪಸರಿಸುವ ಕಾರ್ಯವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಅನಿಸಿಕೆ ವ್ಯಕ್ತಪಡಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮೇ 10ರಮದು ಬೆಳಗ್ಗೆ ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷಪ್ರಕಾಶ ಸಜ್ಜನ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ, ಹೇಮರೆಡ್ಡಿ ಮಲ್ಲಮ್ಮಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.