ಮೂಲವ್ಯಾದಿ ಕಾಯಿಲೆಯಿಂದ ಬೇಸತ್ತು ಬಾಲಕಿ ಆತ್ಮಹತ್ಯೆ

Crime Logo
Published on

ಹಾವೇರಿ: ಮೂಲವ್ಯಾದಿ ಕಾಯಿಲೆಯಿಂದ ಬೇಸತ್ತು ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸವಿತಾ ದ್ಯಾಮಪ್ಪ ಸಣ್ಣಮನಿ (17) ಮೃತ ಬಾಲಕಿ.
ಇವಳು 10 ತಿಂಗಳಿಂದ ಮೂಲವ್ಯಾದಿ ಕಾಯಿಲೆಯಿಂದ ಬಳಲುತ್ತಿದ್ದಳು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net