

ಹಿರೇಕೆರೂರ: ಮೂಲವ್ಯಾದಿ ನೋವು ಗುಣವಾಗದ ಕಾರಣ ವೃದ್ಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಶಿವಮೂತ್ತೇರ್ಪ್ಪ ಭೀರಪ್ಪ ಮುದಿಗೌಡ್ರ (74) ಮೃತ ವೃದ್ಧ.
ಇವರು ಮೂಲವ್ಯಾದಿ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.