ಈರುಳ್ಳಿ ಖರೀದಿ ಕೇಂದ್ರ ತೆರೆಯಲು ಚಿಂತನೆ

HYR DCM 04
Published on

ಹಿರಿಯೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಲಾಕ್‌ಡೌನ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ, ಕರೊನಾ ಸೋಂಕು ತಡೆಗೆ ಶಕ್ತಿ ಮೀರಿ ಶ್ರಮಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಹಾವೇರಿ ಮೂಲಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸೋಮವಾರ ಹಿರಿಯೂರಿಗೆ ಭೇಟಿ ನೀಡಿ, ಲಾಕ್‌ಡೌನ್ ಪರಿಸ್ಥಿತಿ ನಿರ್ವಹಣೆ ಬಗ್ಗೆ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದು ಮಾತನಾಡಿದರು.

ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ಅಡೆ ತಡೆ ಇಲ್ಲದೆ ಮುಕ್ತ ಅವಕಾಶ ನೀಡಲಾಗಿದೆ. ಬಯಲುಸೀಮೆ ಈರುಳ್ಳಿ ಬೆಳೆಗಾರರಿಗೆ ನೆರವಾಗಲು ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.

ಹಿರಿಯೂರು ನಗರದಲ್ಲಿ ಹಾದು ಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸೇರಿದಂತೆ ಅಗತ್ಯ ಅಭಿವೃದ್ಧಿಗೆ ಕೆಲಸಕ್ಕೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಹುಳಿಯಾರು ರಸ್ತೆ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ ನೀಡುವಂತೆ ಬಿಜೆಪಿ ಮುಖಂಡ ಡಿ.ಟಿ.ಶ್ರೀನಿವಾಸ್ ಮನವಿ ಮಾಡಿದರು.

ಜಿಪಂ ಸದಸ್ಯೆ ರಾಜೇಶ್ವರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ದ್ಯಾಮಣ್ಣ, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಸದಸ್ಯ ಮಹೇಶ್ ಪಲ್ಲವ, ಟಿ.ನಾಗಪ್ಪ, ಕೆ.ಪಿ.ಶ್ರೀನಿವಾಸ್, ಶಿವಣ್ಣ, ದಾಸಪ್ಪ, ತಿಪ್ಪೇಸ್ವಾಮಿ, ಓಂಕಾರ್, ರಘು, ಶಾಸಕರ ಆಪ್ತ ಸಹಾಯಕ ನಿರಂಜನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net