ಸರ್ಕಾರಿ ಶಾಲೆ ಸಮಾಜದ ಆಸ್ತಿ :ಫಾತಿಮತ್ ರುಬೀನಾ ಮೆಚ್ಚುಗೆ

2
Published on

ಕುಂಬಳೆ: ಸರ್ಕಾರಿ ಶಿಕ್ಷಣ ಸಂಸ್ಥೆಗಳು ಸಮಾಜದ ಆಸ್ತಿಯಾಗಿದ್ದು ಪ್ರತಿ ಹಳ್ಳಿಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿವೆ. ಅವುಗಳನ್ನು ಉಳಿಸಿ ಬೆಳೆಸಬೇಕು ಎಂದು ಮಂಗಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮತ್ ರುಬೀನಾ ಹೇಳಿದರು.

ಹೇರೂರು ಸರ್ಕಾರಿ ಬುನಾದಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷ ಯೂಸಫ್ ಹೇರೂರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್ ಶುಭ ಹಾರೈಸಿದರು.

ಮಂಜೇಶ್ವರ ಉಪಜಿಲ್ಲಾ ಸಹಾಯಕ ವಿದ್ಯಾಧಿಕಾರಿ ರಾಜಗೋಪಾಲ ಅವರನ್ನು ಸನ್ಮಾನಿಸಲಾಯಿತು. ಮಂಜೇಶ್ವರ ಸಮೂಹ ಸಂಪನ್ಮೂಲ ಕೇಂದ್ರದ ಸಂಯೋಜಕ ಜೋಯ್ ಮಾಹಿತಿ ನೀಡಿದರು. ಹಳೇ ವಿದ್ಯಾರ್ಥಿ ಬಾಲಕೃಷ್ಣ ಶೆಟ್ಟಿ ಶುಭಾಶಂಸನೆಗೈದರು. ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್, ಮಾತೃ ರಕ್ಷಕ ಸಂಘದ ಫೌಝಿಯಾ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಬಿ.ಶ್ರೀಧರ್ ಭಟ್ ಸ್ವಾಗತಿಸಿದರು. ಶಿಕ್ಷಕಿ ಮಧುಶ್ರೀ ಡಿ.ಆರ್. ವರದಿ ಮಂಡಿಸಿದರು. ಶಿಕ್ಷಕ ಸಾಜನ್ ವಂದಿಸಿದರು. ಶಿಕ್ಷಕಿ ನಾಝಿಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಆಯಿಷಾಬಿ, ವೈಷ್ಣವಿ ಸಹಕರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ, ಯುಕೆಜಿ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net