

ಬೆಳಗಾವಿ : ಇಲ್ಲಿನ ನೆಹರೂ ನಗರ, ಗಾಂಧಿನಗರ ಹಾಗೂ ಖಾನಾಪುರದಲ್ಲಿರುವ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಕಚೇರಿಯಲ್ಲಿ ಆ.19ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 3ರಿಂದ ಸಂಜೆ 5ರ ವರೆಗೆ ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ. ಗ್ರಾಹಕರು ತಮ್ಮ ಕುಂದು ಕೊರತೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸುವ ಮೂಲಕ ಸಬೆಯಲ್ಲಿ ಹಾಜರಿದ್ದು, ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.