ವೆನ್ಲಾಕ್ ಮೆಡಿಸಿನ್ ವಿಭಾಗದಲ್ಲಿ ಹೈಟೆಕ್‌ ಐಸಿಯು ಘಟಕ ಉದ್ಘಾಟಿಸಿದ ಸಿಎಂ

IMG-20210812-WA0024
Published on

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಹೈಟೆಕ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ.ಭರತ್ ಶೆಟ್ಟಿ.ವೈ, ಹರೀಶ್ ಪೂಂಜ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net