ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಿ

Untitled design
ಎ.ಉರುಕುಂದಪ್ಪ
Published on

ರಾಯಚೂರು: ನಗರದ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎ.ಉರುಕುಂದಪ್ಪ ಒತ್ತಾಯಿಸಿದರು.


ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ನಗರಸಭೆ 1998ರಲ್ಲಿ ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದ ನಿರ್ಮಾಣ ಕಾರ್ಯವನ್ನು ಕೈಬಿಡಲಾಗಿದೆ.

ಮಾರುಕಟ್ಟೆ ನಿರ್ಮಾಣಕ್ಕಾಗಿ 100ಕ್ಕೂ ಹೆಚ್ಚು ಮಳಿಗೆಗಳನ್ನು ತೆರವುಗೊಳಿಸಿ ಬೀದಿ ಬದಿ ತರಕಾರಿ ವ್ಯಾಪಾರಸ್ಥರಿಂದ ಪ್ರತಿ ತಿಂಗಳು ತಲಾ 300 ರೂ. ವಸೂಲಿ ಮಾಡಲಾಗುತ್ತಿದೆ. ಆದರೆ ಅವರಿಗೆ ಶೆಡ್ ನಿರ್ಮಾಣ, ಇತರ ಸೌಲಭ್ಯ ಒದಗಿಸಿಲ್ಲ.

ಇದರಿಂದ ವ್ಯಾಪಾರಸ್ಥರು ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.
ಕಾರ್ಮಿಕ ವಿಭಾಗದ ಪದಾಧಿಕಾರಿಗಳಾದ ಭಾಸ್ಕರ ಬಾಬು, ಎಂ.ಡಿ.ಜಮೀಲ್ ಅಹ್ಮದ್, ಪಿ.ನರಸಿಂಹಲು, ಎಂ.ಡಿ.ಸಮೀರ್, ಮಹ್ಮದ್ ಅಫ್ಸಲ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net