ಸತತ ಪ್ರಯತ್ನದಿಂದ ಉನ್ನತ ಸಾಧನೆ

SANSHI KLE SANMAN
Published on

ಸಂಶಿ: ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊಡೆದು ಹಾಕಬೇಕು. ಸತತ ಪ್ರಯತ್ನದಿಂದ ಉನ್ನತ ಸಾಧನೆ ಮಾಡಬೇಕು ಎಂದು ಹುಬ್ಬಳ್ಳಿಯ ಕೆಎಲ್​ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಪದವಿ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ. ಲಿಂಗರಾಜ ಡಿ. ಹೊರಕೇರಿ ಹೇಳಿದರು.

ಗ್ರಾಮದ ಕೆಎಲ್​ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಬಿಕಾಂ ಪದವಿ ವಿದ್ಯಾರ್ಥಿಗಳ ಬೀಳ್ಕೊಡುವ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಲೇಜ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಶ್ರದ್ಧೆ ಬೆಳೆಸಿಕೊಳ್ಳಬೇಕು ಎಂದರು. ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ಪದವಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಬಿ.ಬಿ. ಬೂದಿಹಾಳ, ಎಚ್.ಎನ್. ಪಾಟೀಲ, ಬಿ.ವಿ. ಸೈಬಣ್ಣವರ, ಬಿ.ಎಂ. ಕಜ್ಜಿ, ಪ್ರಾಚಾರ್ಯ ಪೊ›. ರಮೇಶ ಅತ್ತಿಗೇರಿ, ಕುಮಾರಿ ಪೂಜಾ ತಂಗಣ್ಣವರ, ದಾನೇಶ್ವರಿ ಬೆಳ್ಳಟ್ಟಿ, ಆರ್.ಜಿ. ಮಣಕಟ್ಟಿ, ಸಿ.ಎಸ್. ಗುರುಮಠ, ಎ.ಎಂ. ಉಪ್ಪಿನ, ವಿ.ಎಸ್. ಪೂಜಾರ, ಎಂ.ಸಿ. ಅಂಗಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net