

ಮಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ತೀರ್ಪು ಹೊರ ಬೀಳುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೋಮು ಸೂಕ್ಷ್ಮ ಪ್ರದೇಶವಾಗಿರುವ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೂಚನೆ ನೀಡಿದರು. ನಗರದಲ್ಲಿ ಪಥ ಸಂಚಲನ ನಡೆಸಿದ್ದಾರೆ.
ಯಾವುದೇ ಗೊಂದಲಗಳು ನಡೆಯುವ ಸಾಧ್ಯತೆ ಇದ್ದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಅಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು. ಸಾರ್ವಜನಿಕರು, ವಿದ್ಯಾರ್ಥಿ ಸಂಘಟನೆಗಳು ಸಹಕಾರ ನೀಡಬೇಕು ಎಂದರು.