ನಕ್ಸಲ್ ಭೀತಿ ಹಿನ್ನೆಲೆ: ಉಡುಪಿಯಲ್ಲಿ 5 ದಿನ ಹೈ-ಅಲರ್ಟ್ ಘೋಷಣೆ

Naxal
Published on

ಕುಂದಾಪುರ: ಬೈಂದೂರು ತಾಲೂಕು ಘಟ್ಟದ ತಪ್ಪಲು ಪ್ರದೇಶಗಳಲ್ಲಿ ನಕ್ಸಲರ ಚಟುವಟಿಕೆ ಕಂಡು ಬಂದ ಕಾರಣ ಉಡುಪಿ ಜಿಲ್ಲೆಯ ಜಿಲ್ಲೆ ಕೆಲ ಭಾಗಗಳಲ್ಲಿ 5 ದಿನ ಹೈ ಅಲರ್ಟ್ ಘೋಷಿಸಲಾಗಿದೆ.

ಹೈ-ಅಲರ್ಟ್: ಕೇರಳದಿಂದ ಆಗಮಿಸಿರುವ ಶಂಕೆ

ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು ತೀವ್ರ ಕಟ್ಟೆಚ್ಚರ ವಹಿಸುವಂತೆ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್)ಗೆ ಸೂಚಿಸಲಾಗಿದೆ. ಕೇರಳದಿಂದ ನಕ್ಸಲರು ಬೈಂದೂರಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.

ವಿಕ್ರಮ್ ಗೌಡ ತಂಡ ಆಗಮಿಸಿರುವ ವದಂತಿ

ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರು ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಓಡಾಟ ನಡೆಸುತ್ತಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಳಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರಿಗೆ ನಕ್ಸಲ್ ಓಡಾಟದ ಮಾಹಿತಿ ದೊರೆತ ಬೆನ್ನಲ್ಲೇ, ಕೂಂಬಿಂಗ್ ಆರಂಭಿಸಿದ್ದು, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ನೇತೃತ್ವದಲ್ಲಿ ಶೋಧಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net