ಈಶ್ವರಪ್ಪ ಮನವೊಲಿಕೆ ಆಗಲಿದೆ

BOMMAI
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಾವೇರಿ ಟಿಕೆಟ್ ಹಂಚಿಕೆ ವಿಷಯದಲ್ಲಿ ಮುನಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ಕುರಿತು ವರಿಷ್ಠರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈಶ್ವರ ಅವರ ಮನವೊಲಿಕೆ ಆಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಟಿಕೆಟ್ ಬದಲಾವಣೆ ಆಗುತ್ತದೆ ಎನ್ನುವುದರ ಬಗ್ಗೆ ನನಗೇನೂ ಮಾಹಿತಿ ಇಲ್ಲ. ರಮೇಶ ಜಾರಕಿಹೊಳಿ ನಮ್ಮ ಹೈ ಕಮಾಂಡ್ ಜತೆ ಸಂಪರ್ಕದಲ್ಲಿ ಇರಬಹುದು. ಅವರು ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಕಳೆದ ಬಾರಿಗಿಂತ ಹೆಚ್ಚು ಲೀಡ್ ಕೊಡುತ್ತೇವೆ. ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗದಗ ಜಿಲ್ಲೆಯ ರೋಣ, ಗದಗ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಎಲ್ಲ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಸೋಮವಾರ ಭೇಟಿ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net