ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

web 66
Published on

ಧಾರವಾಡ: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ನಡೆದಿದ್ದ ಲಾಠಿ ಚಾರ್ಜ್ ಪ್ರಕರಣ ಸಂಬ0ಧ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯುತ್ತಿರುವ ತನಿಖಾ ವರದಿಯನ್ನು 3 ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಹೋರಾಟಗಾರರ ಮೇಲೆ ನಡೆದಿದ್ದ ಲಾಠಿ ಚಾರ್ಜ್ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಕೋರಿ ಶ್ರೀ ಬಸವಜಯ ಮೃತ್ಯುಂಜಯಸ್ವಾಮೀಜಿ ಪರ ವಕೀಲರು ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಿದ್ದರು. ನ್ಯಾಯಾಲಯದ ಸೂಚನೆಯಂತೆ ಸರ್ಕಾರ ಜುಲೈನಲ್ಲಿ ನಿವೃತ್ತ ನ್ಯಾಯಾಧೀಶ ಹನುಮಂತ ಅವರಿಗೆ ತನಿಖೆಯ ಜವಾಬ್ದಾರಿ ವಹಿಸಿತ್ತು. ತನಿಖಾಧಿಕಾರಿಗಳು ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಕೋರಿದ್ದರಿಂದ ನ್ಯಾಯಮೂರ್ತಿ ಸುನೀಲ ದತ್ತ ಹಾಗೂ ವಿಜಯಕುಮಾರ ಪಾಟೀಲ ಅವರಿದ್ದ ವಿಭಾಗೀಯ ಪೀಠ 3 ವಾರಗಳ ಗಡುವು ನೀಡಿ ವಿಚಾರಣೆಯನ್ನು ಮುಂದೂಡಿತು. ಹೋರಾಟಗಾರರ ಪರ ವಕೀಲರಾದ ಪೂಜಾ ಸವದತ್ತಿ ವಕಾಲತ್ತು ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net