ಸಾಲೂರು ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಭೇಟಿ

21 HANUR 3
ಮಲೆಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್. ಇಂದ್ರೇಶ್ ಕುಟುಂಬಸ್ಥರೊಂದಿಗೆ ಭೇಟಿ ನೀಡಿ ಶ್ರೀ ಡಾ.ಶಾಂತಮಲ್ಲಿ ಾರ್ಜುನ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಪಿಎಚ್.ಡಿ ಗ್ರಂಥವನ್ನು ಅವಲೋಕಿಸಿದರು.
Published on

ಹನೂರು : ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠಕ್ಕೆ ಭಾನುವಾರ ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಅವರು ಕುಟುಂಬಸ್ಥರೊಂದಿಗೆ ಆಗಮಿಸಿ ಪೀಠಾಧಿಪತಿ ಶ್ರೀ ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಮಠಕ್ಕೆ ಆಗಮಿಸಿದ ನ್ಯಾಯಾಧೀಶರು ಗದ್ದುಗೆಗೆ ತೆರಳಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಮಹಾಮಂಗಳಾರತಿ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು. ಮಠದಲ್ಲಿರುವ ಶ್ರೀ ಮಹದೇಶ್ವರರ ಪಾದಸ್ಪರ್ಶಿ ಪಾದುಕೆ, ಜೋಳಿಗೆ ಹಾಗೂ ಬಲಮುರಿ ಶಂಖವನ್ನು ವೀಕ್ಷಿಸಿ ಅದರ ಹಿನ್ನ್ನೆಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಶ್ರೀಗಳು ಶಾಲು ಹೊದಿಸಿ ಫಲತಾಂಬೂಲದೊಂದಿಗೆ ಆಶೀರ್ವದಿಸಿದರು. ನ್ಯಾಯಾಧೀಶರು ಮಠದ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಗಳ ಪಿಎಚ್.ಡಿ ಪದವಿ ಸಂಸ್ಕೃತಿ ಗ್ರಂಥವನ್ನು ಅವಲೋಕಿಸಿ ಶ್ಲಾಘಿಸಿದರು. ಇದಕ್ಕೂ ಮುನ್ನ ಮಾದಪ್ಪನ ಸನ್ನಿಧಿಗೆ ತೆರಳಿದ ನ್ಯಾಯಮೂರ್ತಿಗಳು ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net