ಸಿ.ಟಿ. ರವಿ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

web 66
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬೆಳಗಾವಿಯ ಸುವರ್ಣಸೌಧದ ಮೇಲ್ಮನೆಯಲ್ಲಿ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಅವರಿಗೆ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪಕ್ಕೆ ಸಂಬ೦ಧಿಸಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೀಠ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸಿ.ಟಿ. ರವಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿದಾರ ರವಿ ಹಾಗೂ ಹೆಬ್ಬಾಳ್ಕರ್ ಪರ ವಕೀಲರ ವಾದ ಆಲಿಸಿತು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net