ನಿತ್ಯಾನಂದ ಸ್ವಾಮಿಗೆ ಹೈಕೋರ್ಟ್ ನೋಟಿಸ್

nityananda 25 JAN 20
Published on

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ನೀಡಿರುವ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿರುವ ಸಂಬಂಧ ಸಿಐಡಿ ಹಾಗೂ ನಿತ್ಯಾನಂದ ಸ್ವಾಮೀಜಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮೂಲ ದೂರುದಾರ ಕೆ. ಲೆನಿನ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು 1 ವಾರ ಮುಂದೂಡಿತು.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಷರತ್ತುಬದ್ಧ ಜಾಮೀನು ನೀಡಿದ್ದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತು ವಿಧಿಸಿತ್ತು. ಆ ಷರತ್ತು ಉಲ್ಲಂಘಿಸಿರುವ ನಿತ್ಯಾನಂದ, ವಿಚಾರಣೆಗೆ ಗೈರುಹಾಜರಾಗುತ್ತಿದ್ದಾರೆ ಎಂದು ಅರ್ಜಿದಾರ ಪರ ವಕೀಲರು ತಿಳಿಸಿದರು. ತಾವಿನ್ನೂ ಭಾರತದಲ್ಲಿಯೇ ಇರುವಂತೆ ಸುಳ್ಳು ಪ್ರಮಾಣಪತ್ರ ಸೃಷ್ಟಿಸಿ ವಿಚಾರಣೆಗೆ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯ 2019ರ ಡಿ.9ರಂದು ಅರ್ಜಿಯನ್ನು ಮಾನ್ಯ ಮಾಡಿ, ಹಾಜರಾತಿಯಿಂದ ವಿನಾಯಿತಿ ನೀಡಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net