ಅಧಿಸೂಚನೆ ಯಥಾಸ್ಥಿತಿಗೆ ಹೈಕೋರ್ಟ್ ಸೂಚನೆ

high court
Published on

ಬೆಂಗಳೂರು: ರಾಜ್ಯದ 268 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಮಾ.11ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹೊಸ ಅಧಿಸೂಚನೆಯಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲನ್ನು ಎಸ್ಟಿ (ಮಹಿಳೆ) ಕೆಟಗರಿಗೆ ನಿಗದಿಪಡಿಸಿರುವುದನ್ನು ಪ್ರಶ್ನಿಸಿ ಸ್ಥಳೀಯ ನಗರಸಭೆ ಸದಸ್ಯ ಆಲಂಬಾಷಾ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಪಿ.ಬಿ. ಭಜಂತ್ರಿ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಸಿಂಧನೂರು ನಗರಸಭೆಯ ಅಧ್ಯಕ್ಷ ಹುದ್ದೆಯ ಮೀಸಲಾತಿ ಸೇರಿ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಹೊರಡಿಸಲಾಗಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಸದ್ಯ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಏ.1ಕ್ಕೆ ಮುಂದೂಡಿತು.

ದಾಂಡೇಲಿ, ಗದಗ, ತಿಪಟೂರು, ಇಳಕಲ್ ನಗರಸಭೆಯ ಸಿಇಒಗಳು, ನಗರಾಭಿವೃದ್ಧಿ ಇಲಾಖೆ, ರಾಯಚೂರು ಜಿಲ್ಲಾಧಿ ಕಾರಿ, ಸಿಂಧನೂರು ಉಪ ವಿಭಾಧಿಕಾರಿ, ನಗರಸಭೆ ಸಿಇಒಗಳಿಗೆ ನೋಟಿಸ್ ಜಾರಿ ಗೊಳಿಸಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಪೀಠವು ನಿರ್ದೇಶನ ನೀಡಿದೆ.

2018ರ ಸೆ.3ರಂದು ಹೊರಡಿಸಿದ್ದ ಮೂಲ ಅಧಿಸೂಚನೆಯಲ್ಲಿ ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ಟಿ (ಮಹಿಳೆ) ಕೆಟಗರಿಗೆ ಮೀಸಲಿಡಲಾಗಿತ್ತು. ಆದರೆ, ಆ ಮೂಲ ಅಧಿಸೂಚನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಈಗ ಹೊಸ ದಾಗಿ ಮಾ.11ರಂದು ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಅಧ್ಯಕ್ಷ ಸ್ಥಾನವನ್ನು ಎಸ್ಟಿ-ಮಹಿಳೆ ಎಂದು ನಿಗದಿಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net