ಆಯೋಜಕರ ವಿರುದ್ಧ ಕೇಸ್​ಗೆ ಹೈಕೋರ್ಟ್​ ತಡೆ

High court logo
Published on

ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಪುತ್ರ ಉದಯನಿಧಿ ಸ್ಟಾಲಿನ್​ ಅವರು ಸನಾತನ ಧರ್ಮ ಡೆಂಘೆ, ಮಲೇರಿಯಾ ಇದ್ದಂತೆ ಎಂಬುದಾಗಿ ಹೇಳಿಕೆ ನೀಡಿದ್ದ ಕಾರ್ಯಕ್ರಮ ಆಯೋಜಕರ ವಿರುದ್ದ ದಾಖಲಾಗಿದ್ದ ಖಾಸಗಿ ದೂರು ವಿಚಾರಣೆಗೆ ಹೈಕೋರ್ಟ್​ ತಡೆ ನೀಡಿ ಆದೇಶಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ದೂರುದಾರ ಪರಮೇಶ್ವರ ಅವರಿಗೆ ತುರ್ತು ನೋಟಿಸ್​ ಜಾರಿ ಮಾಡಿದೆ.

ತಮ್ಮ ವಿರುದ್ದದ ಪ್ರಕರಣ ರದ್ದುಕೋರಿ ಕಾರ್ಯಕ್ರಮ ಆಯೋಜಕರಾದ ಸು.ವೆಂಕಟೇಷನ್​, ಮತ್ತು ಕುರ ರಾಮಲಿಂಗಂ ಮತ್ತು ಅಧವನ್​ ಧೀಚನ್ಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀತ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ, ಅರ್ಜಿದಾರರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆಯೋಜಕರು ಯಾವುದೇ ಹೇಳಿಕೆ ನೀಡಿಲ್ಲ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮ ನಡೆದ ಚರ್ಚೆ ಸಂಬಂಧ ಬೆಂಗಳೂರಿನಲ್ಲಿ ಖಾಸಗಿ ದೂರು ದಾಖಲಾಗಿದೆ. ಹೀಗಾಗಿ ಪ್ರಕರಣ ರದ್ದು ಮಾಡಬೇಕು ಎಂದು ಕೋರಿದರು.

ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆವರೆಗೂ ಪ್ರಕರಣದ ವಿಚಾರಣೆಗೆ ತಡೆಯಾಜ್ಷೆ ನೀಡಿತು. ಆಕ್ಷೇಪಣೆ ಸಲ್ಲಿಸಲು ದೂರು ದಾರರಿಗೆ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net