ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

Untitled design
ಹರಪನಹಳ್ಳಿ ತಾಲೂಕು ಆಡಳಿತ ಸೌಧದಲ್ಲಿ ದೇವರಾಜ ಅರಸು ಜನ್ಮದಿನ ಆಚರಣೆ ಪೂರ್ವಭಾವಿ ಸಭೆ ನಿಮಿತ್ತ ತಹಸೀಲ್ದಾರ್‌ಬಿ.ವಿ.ಗಿರೀಶಬಾಬು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವಿವಿಧ ಸಂಘಟನೆಗಳ ಮುಖಂಡರಾದ ಗುಡಿಹಳ್ಳಿ ಹಾಲೇಶ, ಸಣ್ಣ ಅಜ್ಜಯ್ಯ, ಭೀಮಪ್ಪ, ಪುರಸಭೆ ನಾಮನಿರ್ದೇಶಿತ ಸದಸ್ಯ ಹೇಮಣ್ಣ ಮೋರಗೇರಿ, ಅರಸೀಕೆರೆಯ ಗೋಪಾಲ ಗೊಂದಲಿ, ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಭೀಮಪ್ಪ, ಮೇಲ್ವಿಚಾರಕ ಬಿ.ಎಚ್.ಚಂದ್ರಪ್ಪ ಇತರರಿದ್ದರು.
Published on

ಹರಪನಹಳ್ಳಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನ ಆಚರಣೆ ನಿಮಿತ್ತ ಪಟ್ಟಣದ ಸ್ಥಳೀಯ ತಾಲೂಕು ಆಡಳಿತ ಸೌಧದಲ್ಲಿ ತಹಸೀಲ್ದಾರ್ ಬಿ.ವಿ.ಗಿರೀಶಬಾಬು ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅರಸೀಕೆರೆ ಗ್ರಾಮದ ಭಾಗವತ ಕೆ.ಬಿ.ಷಣ್ಮುಖಪ್ಪ, ಗೊಂದಳಿ ದುರುಗಪ್ಪ ಹಾಗೂ ಚಿಗಟೇರಿಯ ಮಾಳ್ಗಿ ಆನಂದಪ್ಪ ಅವರಿಗೆ ಮತ್ತು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು.

ದೇವರಾಜ ಅರಸು ಕುರಿತು ಉಪನ್ಯಾಸ ನೀಡಲು ವಕೀಲ ಕಣವಿಹಳ್ಳಿ ಬಿ.ಮಂಜುನಾಥ ಅವರನ್ನು ಆಯ್ಕೆ ಮಾಡಲಾಗಿದ್ದು, ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತು ಭಾಷಣ, ಚಿತ್ರಕಲೆ, ಪ್ರಬಂಧ ಸ್ಪರ್ಧೆ ಆಯೋಜಿಸಲು ನಿರ್ಣಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net