ನೀರಾವರಿಗೆ ಹೆಚ್ಚಿನ ಆದ್ಯತೆ

acceptance of report
pardಬೀಳಗಿ ಪಟ್ಟಣದ ತಾಪಂ ಸಭಾಭವನದಲ್ಲಿ ಶಾಸಕ ಜೆ.ಟಿ. ಪಾಟೀಲ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಣವೀರಯ್ಯ ಪ್ಯಾಟಿಮಠ, ಹಣಮಂತ ಕಾಖಂಡಕಿ, ಶ್ರೀಶೈಲ ಅಂಟಿನ ಇದ್ದರು.
Published on

ಬೀಳಗಿ: ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಜತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ರೈತರ ಮತ್ತು ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ. ಜೆ.ಟಿ. ಪಾಟೀಲ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಆ. 15ರಂದು ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಲಿದ್ದು, ಇದರಿಂದ ಕೂಲಿಕಾರ್ಮಿಕರು, ಬಡವರು, ಆಟೋ ರಿಕ್ಷಾ ಸವಾರರಿಗೆ ಅನುಕೂಲವಾಗಲಿದೆ. ನಿತ್ಯ 200 ಜನರಿಗೆ ಮೂರು ಹೊತ್ತು ಊಟ ದೊರೆಯಲಿದೆ. ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 65 ಕೋಟಿ ರೂ. ಮಂಜೂರಾಗಿದೆ. ಹೊಸ ಪೈಪ್‌ಲೈನ್ ಜೋಡಿಸಿ ಶೀಘ್ರ ನೀರು ಪೂರೈಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಆಟೋ ಚಾಲಕರು ಶಾಸಕ ಪಾಟೀಲರಿಗೆ ಮನವಿ ಪತ್ರ ನೀಡಿ, ಈಗಾಗಲೇ ಶಕ್ತಿ ಯೋಜನೆಯಿಂದಾಗಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಬೀಳಗಿ ಕ್ರಾಸ್‌ನಿಂದ ಪ್ರಯಾಣಿಕರು ಸಿಟಿ ಬಸ್‌ನಲ್ಲೇ ಪಟ್ಟಣಕ್ಕೆ ತೆರಳುವುದರಿಂದ ಆಟೋ ನಂಬಿ ಬದುಕು ಸಾಗಿಸುವವರಿಗೆ ತೀವ್ರ ತೊಂದರೆಯಾಗಿದೆ. ಕುಟುಂಬ ನಿರ್ವಹಣೆ ಕಷ್ಟದಾಯಕವಾಗಿದೆ. ಆದ್ದರಿಂದ ಬೀಳಗಿ ಕ್ರಾಸ್‌ನಿಂದ ಸಿಟಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಒತ್ತಾಯಿಸಿದರು. ಇದಕ್ಕೆ ಸಾರ್ವಜನಿಕರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ಶಾಸಕರು ತಿಳಿಸಿದರು.

ತಾಪಂ ಇಒ ಸಿದ್ದು ನಕ್ಕರಗುಂದಿ, ಪಪಂ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ವಲಯ ಅರಣ್ಯಾಧಿಕಾರಿ ಎಚ್.ಬಿ. ದೋಣಿ, ಪಪಂ ಸದಸ್ಯರಾದ ಪಡಿಯಪ್ಪ ಕರಿಗಾರ, ಅಣವೀರಯ್ಯ ಪ್ಯಾಟಿಮಠ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹಣಮಂತ ಕಾಖಂಡಕಿ, ಶ್ರೀಶೈಲ ಅಂಟಿನ, ಸಂಗಪ್ಪ ಕಂದಗಲ್ಲ, ಚಿನ್ನಪ್ಪ ಬಂಡಿವಡ್ಡರ, ಶಿವಾನಂದ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net