ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ; ಹೈಕಮಾಂಡ್ ಸಿದ್ದರಾಮಯ್ಯ ರಾಜೀನಾಮೆ ಪಡೆಯಲಿದೆ

23 Dwd 4 (B.Y.Vijayendra)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಡಾ ನಿವೇಶನ ಹಗರಣ ಸಂಬ0ಧ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿದೆ ಎಂಬ ಮಹಿತಿ ನಮಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಭೂಮಿ ನೀಡುವುದು ಮತ್ತು ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಒಪ್ಪಿಗೆ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ಆತುರದಲ್ಲಿರುವುದಕ್ಕೆ ನಿದರ್ಶನ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡಲು ರಾಜ್ಯದಲ್ಲಿ ಕಾಂಗ್ರೆಸ್ ಅಽಕಾರಕ್ಕೆ ಬಂದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net