

ಮೈಸೂರು: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2022-23ನೇ ಸಾಲಿನಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶದ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ, ವೃತ್ತಿಪರ ಅಥವಾ ತಾಂತ್ರಿಕ ಶೈಕ್ಷಣಿಕ ಸಾಲ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ವಾರ್ಷಿಕ 3.50 ಲಕ್ಷ ರೂ.ನಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ.10 ಲಕ್ಷ ರೂ. ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಮಂಜೂರು ನೀಡಲಾಗುವುದು.
ಮಾಹಿತಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು (ದೂ:0821-2341194) ಸಂಪರ್ಕಿಸಬಹುದು ಅಥವಾ ನಿಗಮದ https://kvcdc.karnataka.gov.in ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.