

ಕೋಟ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಕೋಟ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ತಿಳಿಸಿದರು.
ಕೋಟದ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ವಾರದ 224ನೇ ಪರಿಸರಸ್ನೇಹಿ ಅಭಿಯಾನದ ನಿಮಿತ್ತ ಕೋಟ ಗ್ರಾಪಂ ವ್ಯಾಪ್ತಿಯ ಮಣೂರು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತೆ, ವನವಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋಟ ಗ್ರಾಪಂ ಕಾರ್ಯದರ್ಶಿ ಶೇಖರ್ ಮರವಂತೆ ಪ್ರಜಾಪ್ರಭುತ್ವದ ಪ್ರತಿಜ್ಞಾ ವಿಧಿ ಭೋದಿಸಿದರು. ಪಂಚವರ್ಣ ಯುವಕ ಮಂಡಲದಿಂದ ಮಣೂರು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತೆ, ಮಹಿಳಾ ಮಂಡಲ ದಿನದ ವನಮಹೋತ್ಸವ ಕಾರ್ಯಕ್ರಮ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪನ್ನಗೊಂಡಿತು.
ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಶೇವ ಸುರೇಶ್ ಗಾಣಿಗ, ಉಪಾಧ್ಯಕ್ಷ ಸಂತೋಷ್ ಪೂಜಾರಿ, ಮನೋಹರ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಉಪಾಧ್ಯಕ್ಷೆ ಪುಷ್ಪಾ ಕೆ.ಹಂದಟ್ಟು, ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ಭವ್ಯ ಮತ್ತಿತರರು ಇದ್ದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ನಿರೂಪಿಸಿದರು.