ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ರಸ್ತೆಯಲ್ಲಿ ಉರುಳು ಸೇವೆ

IMG-20220913-WA0004
Published on

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಬಳಿ ಸಂಪೂರ್ಣ ರಸ್ತೆ ಹದಗೆಟ್ಟಿದ್ದು, ದುರಸ್ತಿಗಾಗಿ ಆಗ್ರಹಿಸಿ ಮಂಗಳವಾರ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ವಿನೂತನ ರೀತಿಯಲ್ಲಿ ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ತಾಂತ್ರಿಕ ಕಾರಣಗಳಿಂದ  ಸ್ಥಗಿತಗೊಂಡಿದ್ದು, ಇದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅಪೂರ್ಣವಾಗಿದೆ. ಹೀಗಾಗಿ ಲಘು ಘನ ವಾಹನಗಳು ಸಂಚಾರಕ್ಕೆ ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸ್ಥಳವು ಅಪಘಾತ ವಲಯವಾಗಿ ಮಾರ್ಪಟ್ಟಿದೆ.  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ರಸ್ತೆಯಲ್ಲಿ ಎರಡು, ಮೂರು ಬಾರಿ ಸಂಚರಿಸಿದ್ದಾರೆ ಆದರೂ ಅವರಿಗೆ ರಸ್ತೆ ಸಮಸ್ಯೆ ಬಗ್ಗೆ ಅರಿವಾಗಿಲ್ಲ. ಸಮಸ್ಯೆ ಬಗೆಹರಿಸುವ ಇಚ್ಚಾಶಕ್ತಿಯನ್ನು ತೋರಿಸುತ್ತಿಲ್ಲ. ಹೀಗಾಗಿ ರಸ್ತೆಯನ್ನು ಪ್ರಧಾನಿ ಮೋದಿ ಅಥವಾ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಸುಮಾರು ಅರ್ಧಗಂಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ನಂತರ ನಗರ ಪೊಲೀಸರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net