ಹೈವೇ ರಸ್ತೆಯಲ್ಲಿ ಬೈಕ್​ನಿಂದ ಬಿದ್ದು ಸವಾರ ಸಾವು

Crime Logo
Published on

ಹಾವೇರಿ: ಬೈಕ್​ನಿಂದ ಬಿದ್ದು ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಎನ್​ಎಚ್​-48ರಲ್ಲಿ ಭಾನುವಾರ ನಡೆದಿದೆ.

ಹುಬ್ಬಳ್ಳಿಯ ಲಿಂಗರಾಜ ನಗರದ ವಿಜಯಕುಮಾರ ಮಹೇಶ ತಳಕಲ್ಲಮಠ (38) ಮೃತ ಬೈಕ್​ ಸವಾರ.

ಈತ ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net