

ಚಿಕ್ಕಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಡಾ. ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆ ಎದುರು ರೈಲ್ವೆ ಹಳಿ ಮತ್ತು ರಸ್ತೆ ಸರ್ವೇ ಜಾಗವನ್ನು ಗುರುವಾರ ಪರಿಶೀಲಿಸಿ ಮಾತನಾಡಿದರು.
ಮಧುಗಿರಿಯಿಂದ ಮುಳಬಾಗಿಲು ಮಾರ್ಗದ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲಾ ಕೇಂದ್ರದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಇದರ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ ಅಂಬೇಡ್ಕರ್ ವೃತ್ತದಿಂದ ಜಾಗದ ವಿಚಾರವಾಗಿ ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಇಲಾಖೆ ನಡುವೆ ವಿವಾದ ಉಂಟಾಗಿದೆ. ಇದನ್ನು ಬಗೆಹರಿಸಲಾಗುತ್ತದೆ. ಉಳಿದ ಕಡೆ ತ್ವರಿತ ಕಾಮಗಾರಿ ನಿರ್ವಹಣೆಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಪ್ರಗತಿದಾಯಕ ಕೆಲಸಗಳ ಚರ್ಚೆ
ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಂಸದರು ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಕಷಿ, ತೋಟಗಾರಿಕೆ, ರೇಷ್ಮೆ, ರೈತ ಉತ್ಪಾದಕ ಸಂಸ್ಥೆಗಳ ಪ್ರಗತಿ ಹಾಗೂ ಕಾರ್ಯ ಚಟುವಟಿಕೆ, ರಾಷ್ಟ್ರೀಯ ಹೆದ್ದಾರಿ ಕೆಲಸಗಳ ಬಗ್ಗೆ ಚರ್ಚಿಸಿದರು. ಮಧ್ಯವರ್ತಿಗಳ ಮೇಲಿನ ಅವಲಂಬನೆಯನ್ನು ತಪ್ಪಿಸಿ, ರೈತರಿಗೆ ನ್ಯಾಯಯುತ ದರ ದೊರಕಿಸಿ ಕೊಡುವುದು, ಗುಣಮಟ್ಟದ ವಾಹಿತಿ ಮತ್ತು ತಂತ್ರಜ್ಞಾನದ ಬಳಕೆಯನ್ನು ಸುಧಾರಿಸುವ ಮೂಲಕ ಉತ್ಪಾದಕತೆ ಹೆಚ್ಚಳ, ಸಾಲ ಮತ್ತು ಸರ್ಕಾರಿ ಸಬ್ಸಿಡಿ ಸೌಲಭ್ಯಗಳ ವಿತರಣೆ, ಆಹಾರ ಸಂಸ್ಕರಣೆ ಮತ್ತು ಬ್ರ್ಯಾಂಡಿಂಗ್ ಮೂಲಕ ಮೌಲ್ಯವರ್ಧನೆಯನ್ನು ಉತ್ತೇಜಿಸುವುದು, ಎಲೆಕ್ಟ್ರಾನಿಕ್ ರಾಷ್ಟ್ರೀಯ ಕಷಿ ವಾರುಕಟ್ಟೆ ಜಾಗೃತಿ ಸೇರಿ ಹಲವು ಸುಧಾರಣಾ ಕ್ರಮಗಳ ಮೂಲಕ ಕಷಿಯನ್ನು ಲಾಭದಾಯಕವನ್ನಾಗಿಸಲು ಸಲಹೆ ನೀಡಿದರು. ಜಿಪಂ ಸಿಇಒ ಪ್ರಕಾಶ್ ಜಿ.ನಿಟ್ಟಾಲಿ ಮತ್ತಿತರರು ಇದ್ದರು.