ಹಿಜಾಬ್ ವಿವಾದ: ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಪೀಠ..

high court
Published on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಹಿಜಾಬ್​ ವಿವಾದ ಕುರಿತ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಇಂದಿಗೆ ಹನ್ನೊಂದು ದಿನಗಳಾಗಿದ್ದು, ಇವತ್ತು ವಿಚಾರಣೆ ಮುಗಿದಿದೆ. ಇಂದು ವಿಚಾರಣೆ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದ್ದು, ನಿರೀಕ್ಷೆಯಂತೆಯೇ ವಿಚಾರಣೆ ಮುಕ್ತಾಯಗೊಂಡಿದೆ.

ಹಿಜಾಬ್​ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ಸೇರಿ ಹಿಜಾಬ್​ಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳ ವಿಚಾರಣೆ ಇಂದು ಪೂರ್ಣಗೊಂಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್​ ಹಾಗೂ ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ತೀರ್ಪನ್ನು ಕಾಯ್ದಿರಿಸಿರುವ ಪೀಠ ಅಲ್ಲದೆ ಇನ್ನೇನಾದರೂ ಅಂಶಗಳಿದ್ದಲ್ಲಿ ಅದನ್ನು ಲಿಖಿತವಾಗಿ ಸಲ್ಲಿಸಲು ಅವಕಾಶ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net