ಸೌಹಾರ್ದತೆ ಕಾಪಾಡುವುದು ಅಗತ್ಯ

110222 Hijab-Kesari Controversy Sindhanuru CPIM Protest
ಸಿಂಧನೂರು ತಹಸಿಲ್ ಕಚೇರಿ ಮುಂದೆ ಸಿಪಿಐ (ಎಂ) ತಾಲೂಕು ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.
Published on

ಸಿಂಧನೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸುವುದರ ಜತೆಗೆ ವಿದ್ಯಾರ್ಥಿಗಳ ಮಧ್ಯೆ ಸೌಹಾರ್ದತೆ ಕಾಪಾಡುವುದು ಅಗತ್ಯವಾಗಿದೆ ಎಂದು ಆಗ್ರಹಿಸಿ ಸಿಪಿಐ (ಎಂ) ತಾಲೂಕು ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.

ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದದಿಂದ ರಾಜ್ಯಾದ್ಯಂತ ವಿದ್ಯಾರ್ಥಿಗಳ ನಡುವೆ ವಿಭಜನೆ ನಡೆದು ಅನಗತ್ಯ ವಿವಾದ ಸೃಷ್ಟಿಯಾಗಿದೆ. ಇದರಿಂದಾಗಿ ಶಾಲಾ, ಕಾಲೇಜ್‌ಗಳಿಗೆ ಸರ್ಕಾರ ರಜೆ ಘೋಷಿಸಿದೆ. ನ್ಯಾಯಾಲಯದಿಂದ ಅಂತಿಮ ಆದೇಶ ಹೊರಬರುವವರೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಕೋಮುವಾದಿ ಶಕ್ತಿಗಳು ಕುಮ್ಮಕ್ಕು ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಿಜಾಬ್ ವಿವಾದವನ್ನು ಸರ್ಕಾರ ಬಗೆಹರಿಸಬಹುದಿತ್ತು. ಆದರೆ ಅದನ್ನು ನಿಭಾಯಿಸುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೂಡಲೇ ಶಾಂತಿ-ಸುವ್ಯವಸ್ಥೆ ಕಾಪಾಡಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net