ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ತೊಂದರೆ

09 ylp 02 (arabail)
Published on

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಅಲ್ಪಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆ ಉಂಟಾಯಿತು.

ನಂತರ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ, ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದು ಬೀಳುವುದು ಮುಂದುವರಿದಿದೆ. ಮಳೆಗಾಲದ ಆರಂಭದಲ್ಲೇ ಗುಡ್ಡ ಕುಸಿತ ಆರಂಭವಾಗಿದ್ದು, ಮಳೆ ಜೋರಾದಲ್ಲಿ ಇನ್ನಷ್ಟು ಕುಸಿಯುವ ಅಪಾಯವಿದೆ.

ಅರಬೈಲ್ ಘಟ್ಟ ಪ್ರದೇಶದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಗುಡ್ಡ ಕುಸಿತ ಸಾಮಾನ್ಯ. ಕಳೆದ ಎರಡು ವರ್ಷಗಳ ಹಿಂದೆ ಜೋರಾದ ಮಳೆಗೆ ಹೆದ್ದಾರಿ ಎರಡೂ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಸಮಸ್ಯೆಯಾಗಿತ್ತು. ಕೆಲ ದಿನಗಳ ಮಟ್ಟಿಗೆ ಭಾರಿ ವಾಹನಗಳ ಓಡಾಟವನ್ನೂ ಸ್ಥಗಿತಗೊಳಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net