ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ

Land sliding in Arabail Ghat. removed with JCB
Published on

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಅಲ್ಪಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆ ಉಂಟಾಯಿತು.

ನಂತರ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಕಳೆದ ಒಂದು ವಾರದಿಂದ ಮಳೆ ಜೋರಾಗುತ್ತಿದ್ದಂತೆ ಆಗಾಗ ಗುಡ್ಡ ಅಲ್ಪ ಪ್ರಮಾಣದಲ್ಲಿ ಕುಸಿಯುತ್ತಲೇ ಇದೆ.

ಗುಡ್ಡ ಕುಸಿದಲ್ಲಿ ಮಣ್ಣು ತೆರವು ಕಾರ್ಯಾಚರಣೆಗಾಗಿ ಒಂದು ಜೆಸಿಬಿ ಕಾಯ್ದಿರಿಸಲಾಗಿದೆ. ಕುಸಿತ ಉಂಟಾದಾಗ ಹೆದ್ದಾರಿ ಇಲಾಖೆಯ ಸೂಪರ್​ವೈಸರ್ ಮುರಗೇಶ ಶೆಟ್ಟಿ ಅವರ ನೇತೃತ್ವದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net