ಗುಡ್ಡದ ಮಣ್ಣು ಕುಸಿದು ನಾಲ್ವರು ಸ್ಥಳದಲ್ಲೇ ಸಾವು; ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತ

Untitled
ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ
Published on

ಕಾರವಾರ: ಗುಡ್ಡ ಜರಿದು ನಾಲ್ವರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಇಡಗುಂದಿ ಸಂತೆಬೈಲ್​ ಬಳಿ ಸೋಮವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ.

ಮಂಜುನಾಥ ನಾಗಪ್ಪ ಭಟ್ಟ ಎಂಬವರ ತೋಟದಲ್ಲಿ 7 ಜನ ಕೆಲಸ ಮಾಡುವಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಮಣ್ಣಿನ ರಾಶಿಯಡಿ ಸಿಲುಕಿದ್ದಾರೆ. ನಾಲ್ವರ ಶವಗಳನ್ನೂ ಪತ್ತೆ ಮಾಡಿ ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಭಾಗ್ಯಶ್ರೀ ಯಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ ಡೋಯಿಪಡೆ (18), ಮಾಳು ಡೋಯಿಪಡೆ (21) ಮೃತಪಟ್ಟವರು.

ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net