ಹುಬ್ಬಳ್ಳಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್​

Pak Pro Slogan
Published on

ಬೆಳಗಾವಿ: ಹುಬ್ಬಳ್ಳಿ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂರು ಜನ ವಿದ್ಯಾರ್ಥಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ಅಮೀರ್, ಬಾಷಿತ್ ಮತ್ತು ತಾಲೀಬ್ ಮೂರು ಜನ ಆರೋಪಿಗಳನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ.ಹಿಂಡಲಗಾ ಜೈಲಿನ ಅಂದೇರಿ ಸೇಲ್​ನಲ್ಲಿ ಮೂವರನ್ನು ಒಂದೇ ಸೆಲ್​ನಲ್ಲಿ ಇರಿಸಲಾಗಿದೆ.

ಹುಬ್ಬಳ್ಳಿ ಮತ್ತು ಹಿಂಡಲಗಾ ಜೈಲಿನಲ್ಲಿ ಬೇರೆ ಕೈದಿಗಳಿಂದ ಹಲ್ಲೆ ಭೀತಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳ ವಿರುದ್ಧ ಹುಬ್ಬಳ್ಳಿ ನಗರದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಸೋಮವಾರ ತರಗತಿಗಳನ್ನು ಬಹಿಷ್ಕಾರ ಮಾಡಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.

ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ದರು. ನೂರಾರು ವಿದ್ಯಾರ್ಥಿಗಳ ಪ್ರತಿಭಟನೆಗೆ ನ್ಯಾಯವಾದಿಗಳು ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net