

ಬೆಳ್ತಂಗಡಿ: ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯುವ ಅವಕಾಶಗಳಿದ್ದು, ಅದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಹೇಳಿದರು.
ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಹಿಂದಿ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ಆತ್ಮೀಯ ಹಾಗೂ ಧೃತಿ ಕಾರ್ಯಕ್ರಮ ನಿರೂಪಿಸಿದರು.