ಹಿಂದು ಸಾಮ್ರಾಜ್ಯೋತ್ಸವ ಕಾರ್ಯಕ್ರಮ ಏ.13 ರಂದು

lng jatre
ಹನುಮಂತ ಅಂಬಿಗೇರ
Published on

ಲಿಂಗಸುಗೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏ.13 ರಂದು ಶ್ರೀರಾಮಸೇನೆ ಸಂಘಟನೆ ನೇತೃತ್ವದಲ್ಲಿ ಶ್ರೀರಾಮ ನವಮಿ ಮತ್ತು ಹಿಂದು ಸಾಮ್ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹನುಮಂತ ಅಂಬಿಗೇರ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಸಂತೆ ಬಜಾರ್‌ನಿಂದ ಗಡಿಯಾರ ಚೌಕ್, ಬಸ್ ನಿಲ್ದಾಣ ವೃತ್ತದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದವರೆಗೆ ಶ್ರೀರಾಮ ಮತ್ತು ಆಂಜನೇಯ ಮೂರ್ತಿಗಳ ಭವ್ಯ ಶೋಭಾಯಾತ್ರೆ ನಡೆಯಲಿದೆ.

ಸಂಜೆ 5 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸನಾತನ ಹಿಂದು ಮುಖ್ಯಸ್ಥ ಆರ್.ಎಸ್.ರಾಜು, ಎಬಿವಿಪಿ ರಾಜ್ಯ ಸಮಿತಿಯ ಭಾಗ್ಯಗೌಡ ಚಡಚಣ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಕಿರಣ್ ಉಪ್ಪಾರ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷ ರಘುಗೌಡ ನಾಯಕ, ಪ್ರಮುಖರಾದ ಶಂಭು ಪಾಟೀಲ್, ಮಂಜುನಾಥ ಗುತ್ತೇದಾರ, ಪುರುಷೋತ್ತಮ ಭಂಡಾರಿ, ಮಂಜುನಾಥ ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net