ಅನ್ಯ ಧರ್ಮೀಯ ಯುವತಿಯೊಂದಿಗೆ ಅಸಭ್ಯ ವರ್ತನೆ ಆರೋಪ; ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್​ಗಿರಿ

Davangere Moral Policing
Published on

ದಾವಣಗೆರೆ: ಮುಸ್ಲಿಂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಎಂಬ ಆರೋಪದ ಮೇಲೆ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಮೆರೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆಯ ಜಾಲಿನಗರ ನಿವಾಸಿ ಶ್ರೀನಿವಾಸ್​ ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದ್ದು, ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ದಾವಣೆಗೆರೆ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಸಂಘಟನೆಯ ಸದಸ್ಯರೊಬ್ಬರು, ಒಂದು ವೇಳೆ ಯುವಕ ಶ್ರೀನಿವಾಸ್​ ಯುವತಿಯೊಂದಿಗೆ ಅನುಚಿತವಾಗಿ ವರ್ತಸಿದ್ದರೆ ಆತನನ್ನು ಹಿಡಿದು ದೂರು ದಾಖಲಿಸಿ ಪೊಲೀಸರಿಗೆ ಒಪ್ಪಿಸಬೇಕಿತ್ತು. ಬದಲಾಗಿ ಗುಂಪೊಂದು ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾರೆ.

Davangere Moral Policing
ಗಾಯಾಳು ಶ್ರೀನಿವಾಸ್ ಪೋಷಕರು

ದುಷ್ಕರ್ಮಿಗಳು ಯುವಕನನ್ನು ಖಾಸಗಿ ಶಾದಿ ಮಹಲ್​ ಒಳಗೆ ಕರೆದೊಯ್ದು ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಬಳಿಕ ಪೊಲೀಸ್​ ಠಾಣೆಯಲ್ಲಿ ಆತನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿ ಪರಾರಿಯಾಗಿದ್ದಾರೆ. ಯುವಕನಿಗೆ ಈಗಾಗಲೇ ನಿಶ್ಚಿತಾರ್ಥವಾಗಿದ್ದು, ಆತನಿಗೆ ಮುದವೆ ನಿಶ್ಚಯವಾಗಿದೆ. ಒಂದು ವೇಳೆ ಆತ ತಪ್ಪು ಮಾಡಿದ್ದರೆ ಪೊಲೀಸರಿಗೆ ಒಪ್ಪಿಸಬೇಕಿತ್ತು. ಅದನ್ನು ಬಿಟ್ಟು ಆತನ ಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಮೆರೆಯುವ ಅವಶ್ಯಕತೆಯಿತ್ತಾ.

ಘಟನೆ ನಡೆದು ಮೂರು ದಿನಗಳು ಕಳೆಯುತ್ತಾ ಬಂದರೂ ಪೊಲೀಸರು ಈವರೆಗೂ ಪ್ರಕರಣದ ಒಬ್ಬ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಎಸಗಿದ ಪುಂಡರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಹಿಂದೂ ಸಂಘಟನೆಯ ಸದಸ್ಯರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net