ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ

ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲ
Published on

ಕಿಕ್ಕೇರಿ: ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಹಳೆ ಬಸ್‌ನಿಲ್ದಾಣದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಜರಂಗದಳ ಕಾರ್ಯಕರ್ತ ಅಕ್ಷಯ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದುಗಳ ಹತ್ಯೆ, ಲವ್‌ಜಿಹಾದ್ ಪ್ರಕರಣ ಹೆಚ್ಚಾಗಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಪುನೀತ್ ಮಾತನಾಡಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯ ಸರ್ಕಾರ ಮತಕ್ಕಾಗಿ ಮೌನವಹಿಸಿದೆ ಎಂದು ಹೇಳಿದರು. ಜೇಟುಸಿಂಗ್, ವೆಂಕಟರಮಣ, ಪ್ರದೀಪ್, ಪುನೀತ್, ನಾಗಣ್ಣ, ಗುಂಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net