ಪೌರಕಾರ್ಮಿಕರ ಮಾದರಿಯಲ್ಲಿ ನೇಮಿಸಿಕೊಳ್ಳಿ

Published on

ಬಳ್ಳಾರಿ ; ಪಾಲಿಕೆಯಲ್ಲಿ ಪೌರ ಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ನೀರು ಸರಬರಾಜು ಮತ್ತು ದುರಸ್ಥಿ ಕಾರ್ಮಿಕರ ಸಂಘವು ಅನಿರ್ದಿಷ್ಟವಾದಿ ಮುಷ್ಕರ ಮಂಗಳವಾರ ನಡೆಸಿತು.

ಕಳೆದ ಹದಿನೈದರಿಂದ ಇಪ್ಪತ್ತು ವರ್ಷದಿಂದ ನೀರು ಸರಬರಾಜು ನೌಕರರಿಗೆ ಸೇವಾ ಭದ್ರತೆ ಇಲ್ಲ. ದಿನೇ ದಿನೇ ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿದ್ದು ಕಡಿಮೆ ವೇತನದಿಂದ ಕುಟುಂಬ ನಿರ್ವಹಿಸಲು ಕಷ್ಟವಾಗಿದೆ. ಆದ್ದರಿಂದ, ರಾಜ್ಯ ಸರ್ಕಾರ ಗುತ್ತಿಗೆ ಪದ್ದತಿ ರದ್ದು ಮಾಡಿ ನೇರ ನೇಮಕಾತಿ ಹಾಗೂ ನೇರ ಪಾವತಿ ಮಾಡಬೇಕು. ಪಾಲಿಕೆಯಲ್ಲಿ ಖಾಲಿಯಿರುವ 131 ಹುದ್ದೆಗಳನ್ನು ಹಾಲಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಭರ್ತಿ ಮಾಡಿಕೊಳ್ಳಬೇಕು. ಈಗಾಗಲೇ ಗುತ್ತಿಗೆ ಪದ್ಧತಿ ರದ್ದುಪಡಿಸುವಂತೆ 2011ರಲ್ಲಿ ರಾಜ್ಯಪಾಲರ ಆದೇಶವಿದ್ದರೂ ಈಡೇರಿಲ್ಲ. ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶವಿದ್ದರೂ ನೇಮಕಾತಿ ಮಾಡಿಕೊಂಡಿರುವುದಿಲ್ಲ. ಆದ್ದರಿಂದ ಉಚ್ಛ ನ್ಯಾಯಾಲಯದ ಆದೇಶದಂತೆ ತುರ್ತಾಗಿ ನೇಮಕಾತಿ ಕಾಯಂ ಗೊಳಿಸಬೇಕು ಎಂದು ಆಗ್ರಹಿಸಿದರು. ಸರ್ಕಾರ ನೇರ ನೇಮಕಾತಿ ಮಾಡಿಕೊಳ್ಳುವವರೆಗೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಭಟನ ನಿರತ ನೌಕರರು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net