ಹಿರೇಬಾಗೇವಾಡಿಗೆ ಸಚಿವ ಅಂಗಡಿ ಭೇಟಿ

Untitled-1
Published on

ಬೆಳಗಾವಿ: ಕರೊನಾ ವೈರಸ್ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಿರುವ ತಾಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬುಧವಾರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಗ್ರಾಮಸ್ಥರು ಲಾಕ್‌ಡೌನ್‌ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು. ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮಸ್ಥರಿಗೆ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net