

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು)ವನ್ನು ಹಿರೇಬಾಗೇವಾಡಿ ಗ್ರಾಮಕ್ಕೆ ಸ್ಥಳಾಂತರ ಮಾಡಲು ಸರ್ಕಾರ ತೀರ್ಮಾನಿಸಿದೆ. ಹಿರೇಬಾಗೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿರುವ 70 ಎಕರೆ ಸರ್ಕಾರಿ ಜಮೀನು ನೀಡಲು ಕಂದಾಯ ಸಚಿವ ಆರ್.ಅಶೋಕ ಅನುಮೋದನೆ ನೀಡಿದ್ದು, ಕ್ಯಾಬಿನೇಟ್ ಅನುಮೋದನೆಯೊಂದೇ ಬಾಕಿ ಉಳಿದಿದೆ ಎಂದು ಬೆಳಗಾವಿ ಗ್ರಾಮೀಣ ಮಾಜಿ ಶಾಸಕ ಸಂಜಯ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೂತರಾಮನಟ್ಟಿ ಗ್ರಾಮದಲ್ಲಿ ರಾಣಿ ಚನ್ನಮ್ಮ ವಿವಿಯನ್ನು 2009ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದ್ದರು. ಆದರೆ, ಈಗ ವಿವಿ ಇರುವ ಭೂತರಾಮನಟ್ಟಿ ಪ್ರದೇಶವು ಅರಣ್ಯ ಇಲಾಖೆಗೆ ಸೇರಿದ್ದರಿಂದ ವಿವಿಯನ್ನು ಇಲ್ಲಿಂದ ಬೇರೆ ಜಿಲ್ಲೆಗೆ ಸ್ಥಳಾಂತರಿಸುವ ಪ್ರಯತ್ನಗಳು ನಡೆದಿವೆ ಎಂದು ಚರ್ಚಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ, ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ರೈಲ್ವೆ ಖಾತೆ
ರಾಜ್ಯ ಸಚಿವ ಸುರೇಶ ಅಂಗಡಿ ಸಹಕಾರದಿಂದ ವಿವಿಯನ್ನು ಸ್ಥಳಾಂತರ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಸಂಜಯ ಪಾಟೀಲ ಹರ್ಷ ವ್ಯಕ್ತಪಡಿದ್ದಾರೆ.