ಬಾಲ್ಯವಿವಾಹಕ್ಕೆ ಪ್ರೋತ್ಸಾಹ ಸಲ್ಲದು

Untitled design 011
Published on

ಗಂಗಾವತಿ: ನಗರದ ಹಿರೇಜಂತಕಲ್ ಶ್ರೀ ಪ್ರಸನ್ನ ಪಂಪಾವಿರೂಪಾಕ್ಷೇಶ್ವರ ದೇವಾಲಯದ ಮೈದಾನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯ ವಿವಾಹ ತಡೆ ಮತ್ತು ಭಿಕ್ಷಾಟನೆ ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ ಬುಧವಾರ ನಡೆಯಿತು.

ಜಿಪಂ, ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಕರಪತ್ರಗಳ ವಿತರಿಸಿ, ಬಾಲ್ಯ ವಿವಾಹ ತಡೆಗೆ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.

ತಹಸೀಲ್ದಾರ್ ಯು.ನಾಗರಾಜ್ ಮಾತನಾಡಿ, ಬಾಲ್ಯ ವಿವಾಹ ಅಪರಾಧವಾಗಿದ್ದು, ತಪ್ಪಿಸ್ಥರಿಗೂ ಮತ್ತು ಪ್ರೋತ್ಸಾಹಿಸುವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಭಿಕ್ಷಾಟನೆ ಅಪರಾಧವಾಗಿದೆ. ಇದನ್ನು ಹೋಗಲಾಡಿಸಲು ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ವ್ಯವಸ್ಥೆ ಮಾಡಬೇಕಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಡಾ. ಶೃತಿ, ಮಕ್ಕಳ ರಕ್ಷಣ ಘಟಕದ ಪ್ರತಿನಿಧಿ ಯಮನಮ್ಮ, ಸಹಾಯವಾಣಿ ಪ್ರತಿನಿಧಿಗಳಾದ ಬಸಮ್ಮ, ಪೂರ್ಣಿಮಾ ಸೇರಿ ಕಾರ್ಮಿಕ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಹೆಜ್ಜೆ ಮಹಿಳಾ ಸಂಘ, ನವಚೇತನಾ ಸಮಾಜ ಸೇವಾ ಟ್ರಸ್ಟ್ ಮತ್ತು ಬಳ್ಳಾರಿ ಭಿಕ್ಷುಕರ ಪುನರ್ವಸತಿ ಕೇಂದ್ರದ ಪ್ರತಿನಿಧಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net